ನವದೆಹಲಿ: ಕೇಂದ್ರ ಸರ್ಕಾರ ಗುರುವಾರ ಜಯಾ ವರ್ಮಾ ಸಿನ್ಹಾ ಅವರನ್ನು ರೈಲ್ವೆ ಮಂಡಳಿಯ ಸಿಇಒ ಮತ್ತು ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, ರೈಲ್ವೆ ಸಚಿವಾಲಯದ 105 ವರ್ಷಗಳ ಇತಿಹಾಸದಲ್ಲಿ ಆ ಹುದ್ದೆಯನ್ನು ಅಲಂಕರಿಸಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಈ ಮೂಲಕ ರೈಲ್ವೆ ಇತಿಹಾಸದಲ್ಲಿ ಈ ಹುದ್ದೆಗೇರಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಜಯ ಸಿನ್ಹಾ ಅವರು ಸೆಪ್ಟೆಂಬರ್ 1 ರಂದು ಅಥವಾ ನಂತರ ಅಧಿಕಾರ ವಹಿಸಿಕೊಳ್ಳುತ್ತಾರೆ ಎಂದು ಸರ್ಕಾರ ಹೇಳಿದೆ.
ಭಾರತೀಯ ರೈಲ್ವೆ ನಿರ್ವಹಣಾ ಸೇವೆಗಳು, ಸದಸ್ಯ (ಕಾರ್ಯಾಚರಣೆ ಮತ್ತು ವ್ಯಾಪಾರ ಅಭಿವೃದ್ಧಿ), ರೈಲ್ವೆ ಮಂಡಳಿಯ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗೆ ಜಯ ವರ್ಮಾ ಸಿನ್ಹಾ ಅವರನ್ನು ನೇಮಕ ಮಾಡಲು ಸಂಪುಟದ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ.