ಪಾದಯಾತ್ರೆ ಮೂಲಕ ಕಾಂಗ್ರೆಸ್ ಜೋಡೋ ಯಾತ್ರೆಯ ಮೊದಲ ವಾರ್ಷಿಕೋತ್ಸವ ಆಚರಣೆ

ಸಮಗ್ರ ಪ್ರಭ ಸುದ್ದಿ
1 Min Read

ಗದಗ:ಜಿಲ್ಲಾ ಕಾಂಗ್ರೆಸ್ ವತಿಯಿಂದ ಎಐಸಿಸಿ ಮುಖಂಡ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಭಾರತ ಜೋಡೋ ಯಾತ್ರೆಯ ಮೊದಲ ವಾರ್ಷಿಕೋತ್ಸವವನ್ನು ಪಾದಯಾತ್ರೆ ಮಾಡುವ ಮೂಲಕ ಆಚರಣೆ ಮಾಡಲಾಯಿತು.

ಗದಗ ನಗರದ ಮಹಾತ್ಮಾ ಗಾಂಧಿ ವೃತ್ತದಿಂದ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯವರೆಗೆ ಪಾದಯಾತ್ರೆ ಜರುಗಿತು.

ಪಾದಯಾತ್ರೆಯಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಜೋಡೋ ಜೋಡೋ ಭಾರತ್ ಜೋಡೋ, ರಾಹುಲ್ ಗಾಂಧಿಯವರಿಗೆ ಜಯವಾಗಲಿ, ಕಾಂಗ್ರೆಸ್ ಪಕ್ಷಕ್ಕೆ ಜಯವಾಗಲಿ ಅಂತಾ ಘೋಷಣೆ ಕೂಗುತ್ತಾ ಪಾದಯಾತ್ರೆ ಮಾಡಿದರು.

ಈ ಸಂಧರ್ಭದಲ್ಲಿ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ, ಮಾಜಿ ಶಾಸಕ ಡಿ ಆರ್ ಪಾಟೀಲ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುಜಾತಾ ದೊಡ್ಡಮನಿ, ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ ಮಂದಾಲಿ ಸೇರಿದಂತೆ ನೂರಾರು ಪದಾಧಿಕಾರಿಗಳು ಕಾರ್ಯಕರ್ತರು ಪಾಲ್ಗೊಂಡಿದ್ದರು.

Share this Article