ನರಗುಂದ : ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಗದಗ ಜಿಲ್ಲೆ ನರಗುಂದ ಪಟ್ಟಣದ ಸರ್ಕಾರಿ ಉರ್ದು ಶಾಲೆಯ ಹೆಡ್ ಮಾಸ್ಟರ್ ನನ್ನು ನರಗುಂದ ಪೊಲೀಸರು ಬಂಧಿಸಿದ್ದಾರೆ.
ನರಗುಂದ ಪಟ್ಟಣದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಪ್ರಭಾರಿ ಮುಖ್ಯ ಶಿಕ್ಷಕ ಅಲ್ಲಾದಿನ್ ಅದೇ ಶಾಲೆಯ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ವಿದ್ಯಾರ್ಥಿನಿ ಈ ಬಗ್ಗೆ ತನ್ನ ತಾಯಿಯ ಬಳಿ ನೋವು ತೋಡಿಕೊಂಡಿದ್ದಳು ನಂತರ ಮಹಿಳಾ ಸಹಾಯವಾಣಿಗೆ ಈ ವಿಷಯ ತಿಳಿಸಲಾಗಿತ್ತು ಕೂಡಲೇ ಪೋಲಿಸ್ ಅಧಿಕಾರಿಗಳು ಹಾಗೂ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳಿಂದ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವಿದ್ಯಾರ್ಥಿನಿ ತಾಯಿ ನೀಡಿದ ದೂರಿನನ್ವಯ ನರಗುಂದ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ಮುಖ್ಯ ಶಿಕ್ಷಕ ಅಲ್ಲಾದಿನ್ ನನ್ನು ಬಂಧಿಸಿದ್ದಾರೆ.