ಗದಗ : ತಾಲೂಕಿನ ಲಕ್ಕುಂಡಿ ಕ್ರಾಸ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿ ಚಲಿಸುತ್ತಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಹೆದ್ದಾರಿಯಲ್ಲೇ ಪಲ್ಟಿಯಾಗಿದೆ.
ಗದಗ ದಿಂದ ಲಕ್ಕುಂಡಿ ಮಾರ್ಗವಾಗಿ ಕೊಪ್ಪಳ ಹೋಗುತ್ತಿದ್ದ ಸಾರಿಗೆ ಬಸ್ ಹೊಸಪೇಟೆ ಯಿಂದ ಹುಬ್ಬಳ್ಳಿಗೆ ಹೊರಟ್ಟಿದ್ದ ಖಾಸಗಿ ಕಾರು ನಡುವೆ ಮುಖಾಮುಖಿ ಡಿಕ್ಕಿ ಹೊಡೆತಕ್ಕೆ ಕಾರು ಸಂಪೂರ್ಣವಾಗಿ ಜಖಂ ಆಗಿದೆ.
ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಗಾಯಾಳುಗಳನ್ನ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸ್ಥಳಕ್ಕೆ ಗದಗ ಗ್ರಾಮೀಣ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.