ಲಕ್ಷ್ಮೇಶ್ವರ :ಶಾಸಕ ಡಾ. ಚಂದ್ರು ಲಮಾಣಿ ವಿರುದ್ಧ ರೈತರ ಹೋರಾಟ ನಡೆಸಿ ಕಪ್ಪು ಬಟ್ಟೆ ಪ್ರದರ್ಶನ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ನಡೆದಿದೆ ಶುಕ್ರವಾರ ಕೇಂದ್ರ ಬರ ಅಧ್ಯಯನ ತಂಡ ಲಕ್ಷ್ಮೇಶ್ವರ ಮತ್ತು ಶಿರಹಟ್ಟಿ ತಾಲೂಕಿಗೆ ಆಗಮಿಸಿದರು ಶಾಸಕ ಡಾ.ಚಂದ್ರು ಲಾಮಣಿ ಸ್ಥಳಕ್ಕೆ ಬಾರದೆ ಇದ್ದಿದ್ದರಿಂದ ಶಾಸಕರ ನಿರ್ಲಕ್ಷ್ಯ ಖಂಡಿಸಿ ರೈತರು ಹಾವಳಿ ಆಂಜನೇಯ ದೇವಸ್ಥಾನ ದಿಂದ ಬಸ್ ನಿಲ್ದಾಣದವರಿಗೆ ಹಲಗೆ ಬಾರಿಸುವ ಮೂಲಕ ಪ್ರತಿಭಟನೆ ನಡೆಸಿದರು ಶಾಸಕ ಡಾ. ಚಂದ್ರು ಲಮಾಣಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.