ಗದಗ : ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಟಾಟಾ ಸುಮೋ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಟಾಟಾ ಸುಮೋ ವಾಹನದಲ್ಲಿದ್ದ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಗದಗ ಜಿಲ್ಲೆ ನೆರೇಗಲ್ ಪಟ್ಟಣದ ಹೊರ ವಲಯದ ನಿಡಗುಂದಿಕೊಪ್ಪದ ಬಳಿ ಅಪಘಾತ ನಡೆದಿದೆ ಗಜೇಂದ್ರಗಡ ಕಡೆಯಿಂದ ಶಿರಹಟ್ಟಿ ಫಕ್ಕಿರೇಶ್ವರ ಮಠಕ್ಕೆ ಹೊರಟಿದ್ದ ಟಾಟಾ ಸೊಮೊ ಹಾಗೂ ಗದಗ ನಗರದಿಂದ ಗಜೇಂದ್ರಗಡ ಕಡೆಗೆ ಹೊರಟಿದ್ದ ಬಸ್ ನಡುವೆ ಡಿಕ್ಕಿಯಾಗಿದೆ.
ಈ ಘಟನೆಯಲ್ಲಿ ಟಾಟಾ ಸೊಮೊ ನಲ್ಲಿದ್ದ 5 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ವಾಯುವ್ಯ ಸಾರಿಗೆ ಬಸ್‌ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ನರೇಗಲ್ಲ ಪೋಲಿಸ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.