ಬೆಂಗಳೂರು: ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರ ಶಾಸಕರಾದ ಬಿವೈ ವಿಜಯೇಂದ್ರ ಅವರನ್ನು ಶುಕ್ರವಾರ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ.
ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜಗತ್ ಪ್ರಕಾಶ್ ನಡ್ಡಾ ಅವರು ವಿಜಯೇಂದ್ರ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ನೂತನ ರಾಜ್ಯಾಧ್ಯಕ್ಷರನ್ನ ಆಯ್ಕೆ ಮಾಡುವ ಮೂಲಕ ಬಿಜೆಪಿ ಹೈಕಮಾಂಡ್ ಬಿ ವೈ ವಿಜಯೇಂದ್ರ ಅವರಿಗೆ ದೀಪಾವಳಿ ಗಿಫ್ಟ್ ನೀಡಿದೆ.