ನಿಯಂತ್ರಣ ತಪ್ಪಿ ರಸ್ತೆ ಬದಿ ಶೌಚಾಲಯಕ್ಕೆ ಗುದ್ದಿದ ಕಾರು:  ಇಬ್ಬರ ಸಾವು 

graochandan1@gmail.com
1 Min Read

ಗದಗ:  ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದಲ್ಲಿ ಇರುವ ಶೌಚಾಲಯದ ಗೋಡೆಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಹೊರವಲಯದ ಕಳಸಾಪೂರ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ ಕಾರು ಚಾಲಕ ಅತಿಯಾಗಿ ವೇಗವಾಗಿ ಕಾರು ಚಲಿಸುತ್ತಿದ್ದ ಅಪಘಾತದ ರಭಸಕ್ಕೆ ಕಾರಿನಲ್ಲಿರುವ ಮೂವರ ಪೈಕಿ ಇಬ್ಬರು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ ಇನೋರ್ವ ನನ್ನು ಜಿಮ್ಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತರನ್ನು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಸಿದ್ದಯ್ಯ ಪಾಟೀಲ್ ಹಾಗೂ ಬಾಬು ತಾರಿಹಾಳ ಎಂದು ಗುರುತಿಸಲಾಗಿದೆ.  ಮತ್ತೊಬ್ಬ ಶಶಿ ಪಾಟೀಲ್ ಅನ್ನೋರು ಗಂಭೀರವಾಗಿ ಗಾಯಗೊಂಡಿದ್ದಾರೆ ಆಸ್ಪತ್ರೆಗೆ ಗದಗ ಎಸ್ಪಿ ಬಿ.ಎಸ್. ನೇಮಗೌಡ ಭೇಟಿ ನೀಡಿದ್ದಾರೆ. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share this Article