145 ಬೀದಿ ಬದಿ ವ್ಯಾಪರಸ್ಥರಿಗೆ ಹೈ-ಟೆಕ್ ತಳ್ಳುಗಾಡಿ ವಿತರಿಸಿದ ಸಚಿವ ಎಚ್.ಕೆ.ಪಾಟೀಲ

ಸಮಗ್ರ ಪ್ರಭ ಸುದ್ದಿ
1 Min Read

ಗದಗ : ಪ್ರಾಮಾಣಿಕ ಬಡ ಜನರು ದೇಶ ಕಟ್ಟುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ಬೀದಿ ಬದಿ ವ್ಯಾಪಾಸ್ಥರು ಸ್ವಾಭಿಮಾನದಿಂದ ತಮ್ಮ ಬದುಕು ಸಾಗಿಸಲು ಅನುವಾಗಲು ಹೈ-ಟೆಕ್ ತಳ್ಳುಗಾಡಿಗಳನ್ನು ವಿತರಿಸಲಾಗುತ್ತಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಹೇಳಿದರು.

ನಗರದ ಕೆ.ಎಚ್.ಪಾಟೀಲ ವೃತ್ತದಲ್ಲಿ 145 ಬೀದಿ ಬದಿ ವ್ಯಾಪರಸ್ಥರಿಗೆ ಹೈ-ಟೆಕ್ ತಳ್ಳುಗಾಡಿಗಳನ್ನು ವಿತರಿಸಿ ಅವರು ಮಾತನಾಡಿದರು. ಬೀದಿ ಬದಿ ವ್ಯಾಪಾರಸ್ಥರಿಗೆ ಹೈ-ಟೆಕ್ ತಳ್ಳುಗಾಡಿಗಳನ್ನು ವಿತರಿಸುತ್ತಿರುವದು ಅತ್ಯಂತ ಸಂತಸದ ಸಂಗತಿಯಾಗಿದೆ ಎಂದರು.

ಬೀದಿ ಬದಿ ವ್ಯಾಪಾರಸ್ಥರಿಗೆ ಸರ್ಕಾರದ ಸೌಲಭ್ಯಗಳನ್ನು ವಿತರಿಸುವಲ್ಲಿ ಜಿಲ್ಲೆಯು ಒಂದು ಹೆಜ್ಜೆ ಮುಂದೆ ಇದ್ದು ಇದರ ಸಂಪೂರ್ಣ ಸದುಪಯೋಗ ಪಡಿಸಿಕೊಳ್ಳುವ ಮೂಲಕ ಆರ್ಥಿಕವಾಗಿ ಸಧೃಢರಾಗುವಂತೆ ತಿಳಿಸಿದರು. ಈ ಹೈ-ಟೆಕ್ ತಳ್ಳುಗಾಡಿಗಳಲ್ಲಿ ವ್ಯಾಪಾರಸ್ಥರು ತಮ್ಮ ತರಕಾರಿ ಶೇಖರಣೆ ಜೊತೆಗೆ ಸುರಕ್ಷಿತವಾಗಿ ಇಟ್ಟುಕೊಳ್ಳಬಹುದಾಗಿದೆ.

ಇಂದು 145 ಬೀದಿ ಬದಿ ವ್ಯಾಪಾರಸ್ಥರಿಗೆ ಹೈ-ಟೆಕ್ ತಳ್ಳುಗಾಡಿಗಳನ್ನು ವಿತರಿಸಲಾಗಿದ್ದು ಬಾಕಿ ಫಲಾನುಭವಿಗಳಿಗೆ ಬರುವ ಜನೇವರಿ ಅಂತ್ಯದೊಳಗಾಗಿ ವಿತರಿಸಲಾಗುವದು ಇದರ ಜೊತೆಗೆ ಬೀದಿ ಬದಿ ವ್ಯಾಪಾರಸ್ಥರ ಅನುಕೂಲಕ್ಕಾಗಿ ನಗರದಲ್ಲಿ ಕೋಲ್ಡ ಸ್ಟೋರೆಜ್ ಘಟಕ ನಿರ್ಮಾಣ ಕುರಿತು ಮನವಿಗೆ ಸ್ಪಂಧಿಸುತ್ತಾ ಜನೇವರಿ 19 ರೊಳಗಾಗಿ ಕೋಲ್ಡ ಸ್ಟೋರೆಜ ಘಟಕವನ್ನು ನಿರ್ಮಾಣ ಮಾಡಲಾಗುವದು ಎಂದು ಸಚಿವ ಎಚ್.ಕೆ.ಪಾಟೀಲ ಅವರು ಇದೇ ಸಂದರ್ಭದಲ್ಲಿ ಬೀದಿ ಬದಿ ವ್ಯಾಪಾರಸ್ಥರಿಗೆ ಭರವಸೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡರ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರಿದ ಆಯುಕ್ತ ರಮೇಶ ವಟಗಲ್, ಮಾಜಿ ಶಾಸಕ ಡಿ.ಆರ್.ಪಾಟೀಲ, ನಗರ ಸಭೆ ಸದಸ್ಯರು, ಗದಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ವಿವಿದೋದ್ದೆಶಗಳ ಸಂಘದ ಪದಾಧಿಕಾರಿಗಳು, ಗಣ್ಯರು, ಬೀದಿ ಬದಿ ವ್ಯಾಪಾರಸ್ಥರು, ಸಾರ್ವಜನಿಕರು ಉಪಸ್ಥಿತರಿದ್ದರು.

Share this Article