ಗದಗ: ನ. 25 ರಂದು ಗದಗ ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ರಾಜ್ಯ ಮಟ್ಟದ ಯುವ ಸಂಸತ್ ಸ್ಪರ್ಧೆ ಆಯೋಜನೆ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವದ ಉಪನಿರ್ದೆಶಕ ಡಾ. ಕೃಷ್ಣಪ್ಪ ಹೇಳಿದರು.
ನ.25 ರಂದು ಬೆಳಿಗ್ಗೆ 10 ಘಂಟೆಗೆ ಪ್ರಾರಂಭವಾಗಲಿರೋ ರಾಜ್ಯ ಮಟ್ಟದ ಯುವ ಸಂಸತ್ ಸ್ಪರ್ಧೆಗೆ ಶಾಲಾ ಶಿಕ್ಷಣ ಇಲಾಖೆ ಹಾಗೂ ಶ್ರೀ ಅನ್ನದಾನೇಶ್ವರ ಪದವಿ ಪೂರ್ವ ಮಹಾವಿದ್ಯಾಲಯ, ನರೇಗಲ್ ಸಂಯುಕ್ತ ಆಶ್ರಯದಲ್ಲಿ ಆಯೋಜನೆ ಮಾಡಲಾಗಿದೆ.
32 ಜಿಲ್ಲೆಗಳ ಒಟ್ಟು 64 ವಿದ್ಯಾರ್ಥಿಗಳು ಯುವ ಸಂಸತ್ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾರೋಪ ಸಮಾರಂಭದ ದಿವ್ಯ ಸಾನಿಧ್ಯವನ್ನು ಹಾಲಕೆರೆ ಅನ್ನದಾನೇಶ್ವರ ಮಠದ ಮ.ನಿ.ಪ್ರ. ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು ಸೇರಿದಂತೆ ವಿವಿಧ ಗಣ್ಯಮಾನ್ಯರು ಭಾಗವಹಿಸಲಿದ್ದಾರೆ.