ಬಾಂಬ್ ಬೆದರಿಕೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ : ಜಿ. ಪರಮೇಶ್ವರ್

graochandan1@gmail.com
1 Min Read

ತುಮಕೂರು: ಶಾಲೆಗಳಲ್ಲಿ ಬಾಂಬ್ ಬೆದರಿಕೆ ಪ್ರಕರಣದ ಕುರಿತು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಪೊಲೀಸ್ ಅಧೀಕ್ಷರಿಗೆ ಕರೆ ಮಾಡಿ ಮಾಹಿತಿ ಪಡೆದರು.
ಬೆದರಿಕೆ ಕರೆ ಬಂದಿರುವ ಎಲ್ಲ ಕಡೆ ಸಿಐಡಿ ಅಧಿಕಾರಿ, ಸಿಬ್ಬಂದಿ ಹಾಗೂ ಎಲ್ಲ ಸ್ಕ್ವಾಡ್‍ಗಳನ್ನು ಕಳುಹಿಸಿ ತಪಾಸಣೆ ನಡೆಸಬೇಕು, ಕಟ್ಟೆಚ್ಚರ ವಹಿಸುವಂತೆ ನಿರ್ದೇಶಿಸಿದರು.

ಬೆದರಿಕೆ ಬಂದಿರುವ 15 ಶಾಲೆಗಳಲ್ಲಿಯೂ ಪೊಲೀಸ್ ಅಧಿಕಾರಿಗಳು ತಪಾಸಣೆ ನಡೆಸಲಿದ್ದಾರೆ. ಕಳೆದ ವರ್ಷವೂ ಇದೇ ರೀತಿ ಕರೆ ಬಂದಿತ್ತು ಎನ್ನಲಾಗುತ್ತಿದೆ. ಪ್ರಕರಣವನ್ನು ಲಘುವಾಗಿ ತೆಗೆದುಕೊಂಡಿಲ್ಲ. ಗಂಭೀರವಾಗಿ ಪರಿಗಣಿಸಲಾಗಿದೆ. ಬಾಂಬ್ ಬೆದರಿಕೆಯ ಇಮೇಲ್ ಬಗ್ಗೆ ಪರಿಶೀಲಿಸುವಂತೆ ಸಿಐಡಿ ಅಧಿಕಾರಿಗಳಿಗೆ ಸೂಚಿಸಿದರು.

ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಮೂಲ ಪತ್ತೆ ಹಚ್ಚುವವರೆಗೂ ಬಿಡುವುದಿಲ್ಲ. ತುಮಕೂರಿನಿಂದ ಬೆಂಗಳೂರಿಗೆ ವಾಪಸ್ ಆದ ನಂತರ ಇಲಾಖೆ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆಯುತ್ತೇನೆ. ಪೋಷಕರು ಮಕ್ಕಳು ಆತಂಕ ಪಡುವುದು ಬೇಡ ಎಂದರು.

- Advertisement -
Ad image

 

Share this Article