ಹೆಣ್ಣು ಶಿಶು ಭ್ರೂಣ ಹತ್ಯೆ ಹಾಗೂ ಬೆಳಗಾವಿ ಘಟನೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ಸಮಗ್ರ ಪ್ರಭ ಸುದ್ದಿ
1 Min Read

ಗದಗ: ಹೆಣ್ಣು ಶಿಶು ಭ್ರೂಣ ಹತ್ಯೆ ಹಾಗೂ ಬೆಳಗಾವಿಯ ವಂಟಿಮೂರಿ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಮಹಿಳೆಯನ್ನು ಬೆತ್ತಲೆ ಮಾಡಿ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿರುವ ಟನೆ ದೇಶಾದ್ಯಂತ ಚರ್ಚೆಗೆ ಒಳಪಟ್ಟಿದೆ. ಸಂತ್ರಸ್ತೆಯನ್ನು ಮುಖ್ಯಮಂತ್ರಿ ಸಿದ್ರಾಮಯ್ಯನವರು ಭೇಟಿ ಮಾಡಿ ಸಾಂತ್ವನ ಹೇಳಿಲ್ಲ ಸರ್ಕಾರ ದಲಿತರ ಕುರಿತು ಮೊಸಳೆ ಕಣ್ಣೀರು ಹಾಕುತ್ತಿದೆ ಕಾಂಗ್ರೆಸ್ ನಡೆ ಖಂಡಿಸಿ ರಾಜ್ಯ ಸರಕಾರದ ವಿರುಧ್ಧ ಗದಗ ನಗರದ ಮಹಾತ್ಮಾ ಗಾಂಧಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಟೈರಗ ಬೆಂಕಿ ಹಚ್ಚಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಮುತ್ತಣ್ಣ ಲಿಂಗನಗೌಡ್ರ, ಬಿಜೆಪಿ ಗ್ರಾಮೀಣ ಘಟಕದ ಭದ್ರೇಶ ಕುಸ್ಲಾಪೂರ, ಬೂದಪ್ಪ ಹಳ್ಳಿ, ಬಾಬು ಸುಂಕದ, ಸುರೇಶ ಶಿವಳ್ಳಿ, ಮುತ್ತಪ್ಪ ಮೂಲಿಮನಿ, ಹನುಮಂತಪ್ಪ ದಿಂಡ್ಡೆನವರ, ಮಹೇಶ್ ಕಂಬಾರ, ಬಸವರಾಜ ಹಾರ್ಲಪುರ, ಮಾದೇವಪ್ಪ ಚಿಂಚಲಿ, ಮಹೇಶ್ ಶಿರಹಟ್ಟಿ ಸೇರಿದಂತೆ ಬಿಜೆಪಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Share this Article