ನವದೆಹಲಿ : ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಬರ ಪರಿಹಾರ ಬಿಡುಗಡೆ ಕುರಿತು ಮಾತುಕತೆ ನಡೆಸಿದ್ದಾರೆ.
ಮಂಗಳವಾರ ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ ಅವರು, ಪ್ರಧಾನಿಗೆ ಶಾಲು ಹೊದಿಸಿ ಶುಭ ಕೋರಿದ್ದಾರೆ. ಬಳಿಕ ಕರ್ನಾಟಕ ಸರ್ಕಾರದ ಮನವಿ ಪತ್ರ ನೀಡಿ, ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.
ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇದರಲ್ಲಿ 4663.12 ಕೋಟಿ ರೂ. ಇನ್‌ಪುಟ್ ಸಬ್ಸಿಡಿ, 12,7577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363.68 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಪ್ರಧಾನಿ ಬಳಿ ಕೋರಿದ್ದಾರೆ.