ಭೀಕರ ಅಪಘಾತ; ಬಸ್, ಲಾರಿ ಮುಖಾಮುಖಿ ಡಿಕ್ಕಿ, ಇಬ್ಬರು ಸಾವು, 15ಕ್ಕೂ ಹೆಚ್ಚು ಜನರಿಗೆ ಗಾಯ

ಸಮಗ್ರ ಪ್ರಭ ಸುದ್ದಿ
1 Min Read

ಗದಗ: ಸಾರಿಗೆ ಸಂಸ್ಥೆಯ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, ಹದಿನೈದಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ಹಳ್ಳಿಕೇರಿ- ಬನ್ನಿಕೊಪ್ಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಕೊಪ್ಪಳದಿಂದ ಗದಗ ಕಡೆ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಹಾಗೂ ತಮಿಳುನಾಡು ಮೂಲದ ಲಾರಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ.

ಘಟನೆಯಲ್ಲಿ ಲಾರಿ ಚಾಲಕ ಹಾಗೂ ಬಸ್‌ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮೃತ ಲಾರಿ ಚಾಲಕನನ್ನು ವಿನೋದಕುಮಾರ್‌ ಹಾಗೂ ಮಹಿಳೆ ಭಾಗ್ಯನಗರ ನಿವಾಸಿ ಗೀತಾ ಕಲಾಲ್ ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಹದಿನೈದಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು ಗಾಯಗೊಂಡವರನ್ನು ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ, ಘಟನಾ ಸ್ಥಳಕ್ಕೆ ಡಿವೈಎಸ್ಪಿ,ಸೇರಿದಂತೆ ಪೋಲಿಸ್ ಸಿಬ್ಬಂದಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Share this Article