ಗದಗ : ಇತ್ತೀಚೆಗೆ ರಾಜ್ಯ ಖನಿಜ ನಿಗಮದ ಅಧ್ಯಕ್ಷರ ಹುದ್ದೆ ಅಲಂಕರಿಸಿದ್ದಕ್ಕಾಗಿ ರೋಣ ಶಾಸಕ ಜಿ.ಎಸ್.ಪಾಟೀಲ ಅವರಿಗೆ ಮಂಗಳವಾರ ರಾಜ್ಯದ ಕಾನೂನು ನ್ಯಾಯ ಮಾನವ ಹಕ್ಕುಗಳು ಸಂಸದೀಯ ವ್ಯವಹಾರಗಳು ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರು ಅಭಿನಂದನೆ ಸಲ್ಲಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಗಣ್ಯರುಗಳಾದ ಬಿ.ಬಿ.ಅಸೂಟಿ, ವಾಸಣ್ಣ ಕುರಡಗಿ, ಸಿದ್ದು ಪಾಟೀಲ, ಪ್ರಭು ಬುರಬುರೆ, ಅಶೋಕ ಮಂದಾಲಿ ಸೇರಿದಂತೆ ಇತರರು ಇದ್ದರು.