ಕ್ಯಾಂಟರ್ ಪಲ್ಟಿ ಮೂವರು ಸಾವು ಮೂವರಿಗೆ ಗಾಯ

graochandan1@gmail.com
1 Min Read

ಗದಗ: ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ಬಳಿಕ್ಯಾಂಟರ್ ಪಲ್ಟಿಯಾಗಿ ಮೂವರು ಸಾವನಪ್ಪಿದ್ದು ಮೂವರಿಗೆ ಗಾಯಗೊಂಡ ಘಟನೆ ಇಂದು ನಡೆದಿದೆ.

ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಸಾವನಪ್ಪಿದ್ದು ಇನ್ನಿಬ್ಬರು ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ.

ಇನ್ನೂ ಮೂವರಿಗೆ ಗಾಯಗಳಾಗಿದ್ದು ಗಾಯಾಳುಗಳಿಗೆ ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದೆ.

ಚಾಲಕ ಪರಾರಿ..

- Advertisement -
Ad image

ನವೀನ್ ಕುಂಬಾರ್ (23) ಸ್ಥಳದಲ್ಲೇ ಸಾವುನಪ್ಪಿದ್ದು ,ನಾಗಪ್ಪ ಕಾಳಿ (23), ಗಂಗಪ್ಪ ಅಕ್ಕಿ (22) ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.

ಮೃತರು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದವರು ಎಂದು ಗುರುತಿಸಲಾಗಿದೆ.

ಕುಂದಗೋಳ ದಿಂದ ಕೊಪ್ಪಳ ಜಿಲ್ಲೆಯ ಕನಕಗಿರಿ ಹೋಗುತ್ತಿದ್ದಾಗ ಘಟನೆ ನಡೆದಿದ್ದು ಚಾಲಕ ಪರಾರಿಯಾಗಿದ್ದಾನೆ.

ಈ ಕುರಿತು ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this Article