ಬೆಂಗಳೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ, ಮಾಜಿ ಕೇಂದ್ರ ಸಚಿವ ವಿ. ಶ್ರೀನಿವಾಸ ಪ್ರಸಾದ್ (76) ನಿಧನ ಹೊಂದಿದ್ದಾರೆ. ಮಧ್ಯರಾತ್ರಿ 1.20ರ ಸುಮಾರಿಗೆ ತೀವ್ರ ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಇತ್ತೀಚೆಗೆ ಬಹು ಅಂಗಾಂಗ ವೈಫಲ್ಯದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ್ ಅವರು ಮೂರು ದಿನಗಳ ಹಿಂದೆ ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ತುರ್ತು ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ನಿನ್ನೆ ಮಧ್ಯರಾತ್ರಿ ಇದ್ದಕ್ಕಿದ್ದಂತೆ ಹೃದಯಾಘಾತವಾಗಿ ನಿಧನ ಹೊಂದಿದ್ದಾರೆ.