ಬೆಂಗಳೂರು : ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಸಾವಿರಾರು ಅಶ್ಲೀಲ ವಿಡಿಯೋಗಳಿದ್ದ ಪೆನ್‌ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದವು. ರಾಜ್ಯ ರಾಜಕಾರಣದಲ್ಲಿ ಇದು ಭಾರೀ ಸಂಚಲನ ಸೃಷ್ಟಿಸುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದ ವರಿಷ್ಠ ಎಚ್‌ಡಿ ದೇವೇಗೌಡ ಸೋಮವಾರ ಜೆಡಿಎಸ್‌ನಿಂದ ಉಚ್ಛಾಟನೆ ಮಾಡಿದ್ದಾರೆ. ಈ ಮೂಲಕ ತಮ್ಮ ಮೊಮ್ಮಗನ ವಿರುದ್ಧವೇ ಕಠಿಣ ಕ್ರಮ ಕೈಗೊಂಡಿದ್ದಾರೆ.