ತುಮಕೂರು: 2023-24ನೇ ಸಾಲಿನ ಎಸ್‌ಎಸ್‌ಎಲ್ ಸಿ ಪರೀಕ್ಷೆ ಫಲಿತಾಂಶದಲ್ಲಿ ಪರೀಕ್ಷೆಯಲ್ಲಿ ಅನುತೀರ್ಣರಾಗಿದ್ದಕ್ಕೇ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತೋವಿನಕೆರೆ ಸಮೀಪದ ಹೆರಜೇನಹಳ್ಳಿಯಲ್ಲಿ ನಡೆದಿದೆ.
ವಿದ್ಯಾರ್ಥಿನಿ ರಂಜಿತಾ, ಪ್ರಿಯದರ್ಶಿನಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿಯರಾಗಿದ್ದು. ವಿದ್ಯಾರ್ಥಿನಿ ರಂಜಿತಾ ಲಕ್ಷ್ಮಣರೇಖೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಇತ್ತ ಬುಕ್ಕಾಪಟ್ಟಣ ಪ್ರೌಢಶಾಲೆಯ ಮತ್ತೋರ್ವ ವಿದ್ಯಾರ್ಥಿನಿ ಪಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ದುರಂತ ಘಟನೆ ಇಂದು ನಡೆದಿದೆ. ಸದ್ಯ ಇಬ್ಬರು ವಿದ್ಯಾರ್ಥಿನಿಯರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಇಂದಿನ SSLC ಫಲಿತಾಂಶದಲ್ಲಿ ಫೇಲ್ ಆಗಿದ್ದರಿಂದ ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.