ಬೆಂಗಳೂರು: ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿರುವ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಸುಮಾರು 94.73 ಕೋಟಿ ಹಣ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಚಿವ ಬಿ. ನಾಗೇಂದ್ರ ಅವರು ಇಂದು ರಾಜೀನಾಮೆ ನೀಡಿದರು.
ಗುರುವಾರ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾದ ಪರಿಶಿಷ್ಟ ವರ್ಗಗಳ ಕಲ್ಯಾಣ ಖಾತೆ ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಿದರು.