ಮೈಸೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ಸ್ಟಾರ್ ನಟ ದರ್ಶನ್ ಸೇರಿ 10 ಮಂದಿಯನ್ನು ಪೋಲಿಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಇಂದು ಬೆಳಗ್ಗೆ ಮೈಸೂರಿನ ಫಾರ್ಮ್ ಹೌಸ್ ನಲ್ಲಿ ನಟ ದರ್ಶನ್ ಅವರನ್ನು ವಶಕ್ಕೆ ಪಡೆಯಲಾಗಿದೆ.
ಘಟನೆ ಹಿನ್ನೆಲೆ:
ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತ ಅಶ್ಲೀಲ ಮೇಸೆಜ್ ಮಾಡಿದ್ದನು ಇದರಿಂದ ಕೆರಳಿದ ದರ್ಶನ್ ಮತ್ತು ಅವರ ಸ್ನೇಹಿತರು ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯ ಮೇಲೆ ಹಲ್ಲೆ ನಡೆಸಿದ್ದರು. ನಂತರ ದರ್ಶನ್ ಸೂಚನೆ ಮೇರೆಗೆ ರೇಣುಕ ಸ್ವಾಮಿಯನ್ನು ಕೊಲೆ ಮಾಡಿ ಮೋರಿಗೆ ಎಸೆದು ಹೋಗಿದ್ದರು. ಈ ಘಟನೆ ನಡೆದಿದ್ದು ಜೂನ್ 9ರಂದು.
ಇದಾಗಿ ಮೋರಿಯಲ್ಲಿ ತೇಲುತ್ತಿದ್ದ ಶವವನ್ನು ಬೀದಿನಾಯಿಗಳು ಕಚ್ಚಿ ಎಳೆದುತಂದಾಗಲೇ ಶವ ಪತ್ತೆಯಾಗಿದ್ದು. ಮೊನ್ನೆ ಭಾನುವಾರ ಶವ ಪತ್ತೆಯಾಗಿತ್ತು. ಪೊಲೀಸರು ಈ ಬಗ್ಗೆ ತನಿಖೆ ಮಾಡುತ್ತಾ ಹೋದಾಗ ಇದರ ಹಿಂದಿನ ರೂವಾರಿ ದರ್ಶನ್ ಎಂದು ತಿಳಿಯಿತು.
ನಟ ದರ್ಶನ್ ಸೂಚನೆ ಮೇರೆಗೆ ಕೊಲೆ ಮಾಡಿದ್ದಾಗಿ ನಾಲ್ವರು ಆರೋಪಿಗಳು ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾರೆ. ಘಟನೆ ವೇಳೆ ಸ್ಥಳದಲ್ಲಿ ದರ್ಶನ್ ಕೂಡ ಇದ್ದರು ಎನ್ನಲಾಗಿದೆ. ಈ ಪ್ರಕರಣದಲ್ಲಿ ದರ್ಶನ್ ಸೇರಿ 10 ಜನರನ್ನು ವಶಕ್ಕೆ ಪಡೆಯಲಾಗಿದೆ.