ಪಾರ್ಕಿಂಗ್ ಸೇರಿದಂತೆ ನಗರದಲ್ಲಿ ಸುಗಮ ವಾಹನ ಸಂಚಾರಕ್ಕೆ ಕ್ರಮ ಕೈಗೊಳ್ಳಲು ಸೂಚನೆ: ಎಸ್ಪಿ ಬಿ.ಎಸ್.ನೇಮಗೌಡ

ಸಮಗ್ರ ಪ್ರಭ ಸುದ್ದಿ
1 Min Read

ಗದಗ : ಗದಗ-ಬೆಟಗೇರಿ ಅವಳಿ ನಗರದಲ್ಲಿ ಮಂಗಳವಾರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ ಅವರು ಪ್ರಮುಖ ವೃತ್ತಗಳಿಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸರಾಗ ಮಳೆ ನೀರು ಹರಿಯುವಿಕೆ, ತಗ್ಗು ಗುಂಡಿಗಳ ಮುಚ್ಚುವಿಕೆ, ಉತ್ತಮ ಪಾರ್ಕಿಂಗ್ ವ್ಯವಸ್ಥೆ ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿರುವ ಅಡೆತಡೆಗಳನ್ನು ನಿವಾರಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ಕುರಿತು ಕ್ರಮ ಕೈಕೊಳ್ಳಬೇಕೆಂದು ನಗರ ಸಭೆಯ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಸ್ಥಳದಲ್ಲಿದ್ದ ಸಾರ್ವಜನಿಕರ ಕುಂದು ಕೊರತೆಗಳನ್ನು ಅವರು ಆಲಿಸಿ ಸಾರ್ವಜನಿಕರಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆ ಕಲ್ಪಿಸಲು ಮತ್ತು ನಗರದ ಸಂಚಾರ ವ್ಯವಸ್ಥೆ ಪರಿಣಾಮಕಾರಿ ಹಾಗೂ ಕಾನೂನು ಸುವ್ಯವಸ್ಥೆಯ ನಿರ್ವಹಣೆಯ ದೃಷ್ಟಿಯಿಂದ ರಾತ್ರಿ ಮತ್ತು ಹಗಲು ಪೆಟ್ರೋಲಿಂಗ್ ನಡೆಸಲಾಗುತ್ತಿದೆ. ಅದೇ ರೀತಿ ಜಿಲ್ಲೆಯ ಎಲ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉತ್ತಮ ಕಾರ್ಯವಾಗಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಎಮ್.ಜಿ. ಸಂಕದ, ಹಾಗೂ ಡಿಎಸ್ ಪಿ,ಸಿಪಿಐ,ಪಿಐ ಸೇರಿದಂತೆ ಪೊಲೀಸ್ ಇಲಾಖೆ ಸಿಬ್ಬಂದಿ ಹಾಜರಿದ್ದರು.

Share this Article