ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಚಾಲಕನ 2 ಕಾಲುಗಳು ಕಟ್ ಆಗಿ ನಾಲ್ವರು ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿದೆ. ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ ಕ್ರಾಸ್ ಬಳಿ ಘಟನೆ ನಡೆದಿದೆ.
ಹುಬ್ಬಳ್ಳಿ ಕಡೆಯಿಂದ ಕುಮಟಾಗೆ ಹೋಗುತ್ತಿದ್ದ ಸರ್ಕಾರಿ ಬಸ್ನಲ್ಲಿ 30ಕ್ಕೂ ಅಧಿಕ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಇದೆ ಸಮಯದಲ್ಲಿ ರಾಮನಾಳ ಕ್ರಾಸ್ ಬಳಿ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿದ್ದರಿಂದ ರಸ್ತೆ ಬದಿಯ ಬೇವಿನ ಮರಕ್ಕೆ ಬಸ್ ಡಿಕ್ಕಿ ಹೊಡೆದಿದೆ ಇದರ ಪರಿಣಾಮವಾಗಿ ಡ್ರೈವರ್ನ ಎರಡು ಕಾಲುಗಳು ಕಟ್ ಆಗಿದ್ದು ಈ ಅಪಘಾತದಲ್ಲಿ ಬಸ್ ಮುಂಭಾಗ ನುಜ್ಜಾಗಿದೆ.
ಬಸ್ನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರ ಪೈಕಿ ನಾಲ್ವರು ಪ್ರಯಾಣಿಕರಿಗೆ ಗಂಭೀರವಾದ ಗಾಯಗಳು ಆಗಿವೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಕಲಘಟಗಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.