ಮುಖ್ಯ ಮಂತ್ರಿ ಹುದ್ದೆಗೆ 2 ದಿನದಲ್ಲಿ ರಾಜೀನಾಮೆ ಸ್ವತಃ ಸಿಎಂ ಘೋಷಣೆ

ಸಮಗ್ರ ಪ್ರಭ ಸುದ್ದಿ
1 Min Read

ನವದೆಹಲಿ : ಮುಖ್ಯಮಂತ್ರಿ ಹುದ್ದೆಗೆ ರಾಜಿನಾಮೆ ಘೋಷಿಸುವುದಾಗಿ ದೆಹಲಿ ಮುಖ್ಯಮಂತ್ರಿ ಆಫ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿಕೆ ನೀಡಿದ್ದಾರೆ. ಜೈಲಿನಿಂದ ಬಿಡುಗಡೆಯಾದ ನಂತರ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾಡಿದ ಮೊದಲ ಭಾಷಣದಲ್ಲಿ ಅವರು ಈ ರೀತಿ ಹೇಳಿದ್ದಾರೆ.ಇನ್ನೆರಡು ದಿನಗಳಲ್ಲಿ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಭಾನುವಾರ ತಿಳಿಸಿದ್ದಾರೆ.

ಅಬಕಾರಿ ನೀತಿ ಸಂಬಂಧಿತ ಭ್ರಷ್ಟಾಚಾರ ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದ ನಂತರ ಮೊದಲ ಭಾಷಣದಲ್ಲಿ ಈ ರೀತಿ ಹೇಳಿಕೆ ನೀಡಿದ್ದಾರೆ. ತಮ್ಮ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ರೂಪಿಸಿರುವ ಷಡ್ಯಂತ್ರಗಳಿಂದ ಅವರ ‘ಬಂಡೆಯಂತಹ ಸಂಕಲ್ಪ’ ಮುರಿಯಲು ಸಾಧ್ಯವಿಲ್ಲ ಮತ್ತು ದೇಶಕ್ಕಾಗಿ ಹೋರಾಟ ಮುಂದುವರಿಸುವುದಾಗಿ ಹೇಳಿದರು.

Share this Article