ಕುಂದಗೋಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ದಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಕುಂದಗೋಳ ತಾಲೂಕಿನ ಪಶುಪತಿಹಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಹಾಗೂ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕುಂದಗೋಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಂಪನ್ಮೂಲ ವ್ಯಕ್ತಿ ಎಂ ಎಸ್ ಚಿಕ್ಕನಗೌಡ್ರ, ಸಮೂಹ ಸಂಪನ್ಮೂಲ ವ್ಯಕ್ತಿ ಎಸ್ ಬಿ ಶರಾವರಿ ಮತ್ತು ಶಾಲೆಯ ಮುಖ್ಯೋಪಾಧ್ಯಾಯ ವಿ ಬಿ ಉಪಾಸಿ ಅವರು ಸಸಿಗೆ ನೀರುಣಿಸೋ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಪರಿಸರ ಸಂರಕ್ಷಣೆಯಲ್ಲಿ ನಮ್ಮ ಕರ್ತವ್ಯದ ಬಗ್ಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮಾತನಾಡಿದರು. ಅಕ್ಷತಾ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯಕ್ರಮಗಳ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷರು, ಉಪಾಧ್ಯಕ್ಷರು, ಎಸ್ ಡಿ ಎಂ ಸಿ ಸದಸ್ಯರು ಸೇರಿದಂತೆ ಶಿಕ್ಷಕರಾದ ಕೆ ಟಿ ಪಟೇಲ್, ವಾಯ್ ಎನ್ ಪಾಟೀಲ್, ಎ ಆರ್ ಮಡಿಸಬಣ, ವಿ ಬಿ ಅರಳಿ, ಕೃಷಿ ಮೇಲ್ವಿಚಾರಕರು,ವಿದ್ಯಾರ್ಥಿಗಳು ಭಾಗವಹಿಸಿದ್ದರು.