ಪಿಡಿಓ ಸೇರಿದಂತೆ ವಿವಿಧ ವೃಂದದ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ.4 ರಿಂದ ಫ್ರೀಡಂ ಪಾರ್ಕಿನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ:  ಮಹಾಂತೇಶ ಖೋತ್

ಸಮಗ್ರ ಪ್ರಭ ಸುದ್ದಿ
1 Min Read

ಗದಗ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಮತ್ತು ನೌಕರರ ಎಲ್ಲ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯತಿ ಸದಸ್ಯ ಒಕ್ಕೂಟದ ನೇತೃತ್ವದಲ್ಲಿ ಅ.4 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಅನಿರ್ದಿಷ್ಟಾವಧಿಯ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಆ ಕುರಿತು ಹೇಳಿಕೆ ನೀಡಿರುವ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ಲೆಕ್ಕ ಸಹಾಯಕ ಕ್ಷೇಮಾಭಿವೃದ್ದಿ ಸಂಘದ ರಾಜ್ಯಾದ್ಯಕ್ಷ ಮಹಾಂತೇಶ ಖೋತ್ ರಾಜ್ಯದ 68% ರಿಂದ 70% ಜನರಿಗೆ ಸ್ಥಳೀಯ ಸಂಸ್ಥೆಯಾದ ಗ್ರಾಮ ಪಂಚಾಯತಿಗಳಿಂದ ಶೇಕಡಾ 70% ರಷ್ಟು ಸೇವೆಗಳನ್ನು ನೀಡಲಾಗುತ್ತಿದೆ. ಈ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಗ್ರಾಮ ಪಂಚಾಯತಿ ಅಧ್ಯಕ್ಷರು, ಜನಪ್ರತಿನಿಧಿಗಳು ,ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಲೆಕ್ಕ ಸಹಾಯಕರು ಹಾಗೂ ಗ್ರಾಮ ಪಂಚಾಯಿತಿಯ ಎಲ್ಲಾ ಸಿಬ್ಬಂದಿ ವರ್ಗ ಕಾರ್ಯನಿರ್ವಹಣೆಯಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳು ಪರಿಹರಿಸುವಂತೆ ಹಾಗೂ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರ ಹಾಗೂ ಇಲಾಖೆಗೆ ಹಲವಾರು ವರ್ಷಗಳಿಂದ ಮನವಿ ಸಲ್ಲಿಸುತ್ತಾ ಬಂದರೂ ಯಾವುದೇ ಪ್ರಯೋಜನ ಆಗಿಲ್ಲ, ಮನವಿಗಳಿಗೂ ಸ್ಪಂದಿಸದೆ ನೌಕರರನ್ನು ಹೋಣೆಗಾರರನ್ನಾಗಿ ಮಾಡಲಾಗುತ್ತಿದೆ. ಜೊತೆಗೆ ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಲೆಕ್ಕ ಸಹಾಯಕರು ಸುಮಾರು 10 ವರ್ಷಗಳಿಂದ ಯಾವುದೇ ಬಡ್ತಿ ಇಲ್ಲದೆ ಕಾರ್ಯನಿರ್ವಹಿಸುತ್ತಿದ್ದಾರೆ, ಸರ್ಕಾರದ ಸಾಕಷ್ಟು ಯೋಜನೆಗಳನ್ನು ಗ್ರಾಮ ಪಂಚಾಯಿತಿ ನಿರ್ವಹಿಸುತ್ತಿರುವುದರಿಂದ ಈಗಿರುವ ದ್ವಿತೀಯ ದರ್ಜೆ ಸಹಾಯಕರನ್ನು ಪ್ರಥಮ ದರ್ಜೆ ಲೆಕ್ಕ ಸಹಾಯಕರಾಗಿ ಬಡ್ತಿ ನೀಡಬೇಕು ಮತ್ತು ಗ್ರೇಟ್-2 ಗ್ರಾಮ ಪಂಚಾಯತಿಗಳಿಗೆ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಯನ್ನು ಸೃಜನೆ ಮಾಡಬೇಕು, ತಾಲೂಕು ಮತ್ತು ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆಯ ಸಹಾಯಕ ಹುದ್ದೆಗಳಿಗೆ ಗ್ರಾಮ ಪಂಚಾಯ್ತಿಗಳಲ್ಲಿ ಸುಮಾರು ವರ್ಷಗಳಿಂದ ಕರ್ತವ್ಯನಿರ್ವಹಿಸುತ್ತಿರುವ ದ್ವಿತೀಯ ದರ್ಜೆ ಲೆಕ್ಕ ಸಹಾಯಕರನ್ನು ಬಡ್ತಿಗೆ ಪರಿಗಣಿಸಬೇಕು ಹಾಗೂ ಗ್ರೇಡ್-1 ಕಾರ್ಯದರ್ಶಿ ಹುದ್ದೆಗಳನ್ನು ಶೇ 100% ಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳು ಈಡೇರುವವರೆಗೂ ಗ್ರಾಮ ಪಂಚಾಯತಿ ಸೇವೆಗಳನ್ನು ನಿಲ್ಲಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಕೈಗೊಳ್ಳಲಾಗುತ್ತಿದೆ ಅಂತಾ ಮಾತನಾಡಿದ್ರು. ಶೀಘ್ರವೇ ಸರ್ಕಾರ ನಮ್ಮ‌ ಮನವಿಗೆ ಸ್ಪಂದಿಸಬೇಕು ಎಂದು ಮನವಿ ಮಾಡಿದರು.

Share this Article