ಮೈಸೂರು : ಇಂದಿನಿಂದ ರಾಜ್ಯದೆಲ್ಲಡೆ ದಸರಾ ಹಬ್ಬದ ಸಂಭ್ರಮ ಶುರುವಾಗಿದೆ. ವಿಶ್ವ ವಿಖ್ಯಾತ ಮೈಸೂರು ನಾಡ ಹಬ್ಬದ ಸಲುವಾಗಿ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಬೆಳ್ಳಿಯ ರಥದಲ್ಲಿ ಪ್ರತಿಷ್ಠಾಪನೆಯಾಗಿದ್ದ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಸಾಹಿತ್ಯ ಡಾ. ಹಂಪ ನಾಗರಾಜಯ್ಯ ಪುಷ್ಪಾರ್ಚನೆ ಸಲ್ಲಿಸಿದರು. ಈ ಮೂಲಕ 10 ದಿನಗಳ ದಸರಾ ಉತ್ಸವ 2024ಕ್ಕೆ ಅವರು ವಿಧ್ಯುಕ್ತ ಚಾಲನೆ ಕೊಟ್ಟಿದ್ದಾರೆ.
ಮೈಸೂರಿನಲ್ಲಿ ತಾಯಿ ಚಾಮುಂಡೇಶ್ವರಿಗೆ ಗುರುವಾರ ಬೆಳಗ್ಗೆ 9.31ಕ್ಕೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಸಾಹಿತಿ ಹಂಪ ನಾಗರಾಜಯ್ಯ ಅವರೊಂದಿಗೆ ಗಣ್ಯರಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್ .ಸಿ.ಮಹದೇವಪ್ಪ ಅಗ್ರಪೂಜೆ ಸಲ್ಲಿಸಿದರು. ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ನೆರವೇರಿಸಿದರು.