ಚಲನಚಿತ್ರ ನಿರ್ದೇಶಕ ಗುರುಪ್ರಸಾದ್ ನೇಣು ಬಿಗಿದುಕೊಂಡು ಆತ್ಮಹತ್ಯೆ 

ಸಮಗ್ರ ಪ್ರಭ ಸುದ್ದಿ
0 Min Read

ಬೆಂಗಳೂರು: ‘ಮಠ’, ‘ಎದ್ದೇಳು ಮಂಜುನಾಥ’ ಮುಂತಾದ ಸಿನಿಮಾಗಳನ್ನು ನಿರ್ದೇಶಿಸಿ ಎಲ್ಲರ ಗಮನಸೆಳೆದಿದ್ದ ನಿರ್ದೇಶಕ ಗುರುಪ್ರಸಾದ್ ಅವರು ಸಾವನ್ನಪ್ಪಿದ್ದಾರೆ,

ಕೆಲ ದಿನಗಳ ಹಿಂದೆ ಮಾದನಾಯಕನಹಳ್ಳಿಯಲ್ಲಿ ಇರುವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದು, ಭಾನುವಾರ (ನ.4) ಮೃತದೇಹ ಪತ್ತೆಯಾಗಿದೆ.
ಅವರಿಗೆ 52 ವರ್ಷ ವಯಸ್ಸಾಗಿತ್ತು ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು ಗುರುಪ್ರಸಾದ್ ಅವರು ಯಾವಾಗ ಆತ್ಮಹತ್ಯೆ ಮಾಡಿಕೊಂಡಿರಬಹುವುದು ಎಂಬ ಮಾಹಿತಿ ಸಿಕ್ಕಿಲ್ಲ. ಆದರೆ ಮೃತದೇಹವು ಕೊಳೆಯ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತದೇಹದ ಸ್ಥಿತಿಯನ್ನು ಗಮನಿಸಿದರೆ, 10 ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯ ಇದೆ. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನು ತಿಳಿದು ಬಂದಿಲ್ಲ.

Share this Article