ಗದಗ: ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವುನಪ್ಪಿದ್ದು ಮತ್ತೋರ್ವ ಯುವತಿ ಗಾಯಗೊಂಡಿದ್ದ ಪರಿಣಾಮವಾಗಿ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ದುರ್ಘಟನೆ ಗದಗ ತಾಲೂಕಿನ ಹುಲಕೋಟಿ ಗ್ರಾಮದಲ್ಲಿ ನಡೆದಿದೆ ಹುಬ್ಬಳ್ಳಿ-ಹೊಸಪೇಟೆ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಘಟನೆ ನಡೆದಿದ್ದು.
ಸಮೀರ್ ಗುಡಿಸಲುಮನಿ (21), ಉಳವೇಶ್ (15) ಮೃತ ದುರ್ದೈವಿಗಳಾಗಿದ್ದು ನೇತ್ರಾವತಿ ಹಿಂಬದಿಯ ಸವಾರಳಿಗೆ ಗಂಭೀರ ಗಾಯಗಳಾಗಿವೆ.
ಮೃತ ಉಳವೇಶ್ ಹೊಸಹಳ್ಳಿ ಗ್ರಾಮದ ನಿವಾಸಿ ಮತ್ತೋರ್ವ ಮೃತ ವ್ಯಕ್ತಿ ಸಮೀರ್ ಹುಲಕೋಟಿ ನಿವಾಸಿ ಎಂದು ಗುರುತಿಸಲಾಗಿದ್ದು ಗಾಯಾಳು ನೇತ್ರಾವತಿ ಯನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದು ಸ್ಥಳಕ್ಕೆ ಗದಗ ಗ್ರಾಮೀಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.