ಗದಗ: ತಡ ರಾತ್ರಿ ಶಾಲೆಯ ವಾರ್ಷಿಕೋತ್ಸವ ಮುಗಿಸಿ ಮರಳಿ ಬರುವಾಗ ಹೈಸ್ಕೂಲ್ ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ಕಾರು ಡಿವೈಡರ್ ಗೆ ಗುದ್ದಿ ಇಬ್ಬರು ವಿದ್ಯಾರ್ಥಿಗಳು ಸಾವಿಗೀಡಾಗಿದ್ದು, ಮತ್ತಿಬ್ಬರು ಗಾಯಗೊಂಡ ಘಟನೆ ಹುಬ್ಬಳ್ಳಿ-ಹೊಸಪೇಟೆ ರಾಷ್ಟೀಯ ಹೆದ್ದಾರಿ ಮಧ್ಯದ ಹುಲಕೋಟಿ ಗ್ರಾಮದ ಬಳಿ ನಡೆದಿದೆ.
ಘಟನೆಯಲ್ಲಿ ಮಹಮ್ಮದ್ ಮುಜಾವರ್ (16), ಸಂಜೀವ್ ಗಿರಡ್ಡಿ (16) ಮೃತಪಟ್ಟಿದ್ದಾರೆ. ಆಶಿಸ್ ಗುಂಡುರ್, ಸೇರಿದಂತೆ ಮತ್ತೋರ್ವ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿವೆ ಜೆಮ್ಸ ಆಸ್ಪತ್ರೆ ದಾಖಲು ಮಾಡಿ ಚಿಕಿತ್ಸೆ ನೀಡುತ್ತಿದ್ದಾರೆ.
ಹುಲಕೋಟಿ ರಾಜೇಶ್ವರಿ ವಿದ್ಯಾನಿಕೇತನ ಶಾಲೆಯಲ್ಲಿ ವಿದ್ಯಾರ್ಥಿಗಳು 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಮುಗಿಸಿ ತಡರಾತ್ರಿ ಬರುವ ವೇಳೆ ನಿಯಂತ್ರಣ ತಪ್ಪಿದ ಕಾರು ರಸ್ತೆಯಲ್ಲಿನ ವಿದ್ಯುತ್ ಕಂಬಕ್ಕೆ ಗುದ್ದಿ ಡಿವೈಡ್ ರ ಡಿಕ್ಕೆ ಹೊಡೆದಿದೆ ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನುಜ್ಜಾಗಿದೆ ನಾಲ್ಕು ಜನ ವಿದ್ಯಾರ್ಥಿಗಳು ಮಾತ್ರ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು.
ಅತಿಯಾದ ವೇಗವೇ ದುರ್ಘಟನೆಗೆ ಕಾರಣವಾಗಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಗದಗ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.