ಗದಗ : ಗದಗ – ಬೆಟಗೇರಿ ನಗರಭೆ ಇಂಜಿನಿಯರ್ ಗೆ ಬೆಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ನಗರ ಸಭೆ ಕಾರ್ಯನಿರ್ವಾಹಕ ಇಂಜಿನಿಯರ್ ಹುಚ್ಚೇಶ್ ಬಂಡಿವಡ್ಡರ್ ಸಂಬಂಧಿಸಿದಂತೆ ಗದಗ, ಗಜೇಂದ್ರಗಡ, ಬಾಗಲಕೋಟೆ ಸೇರಿದಂತೆ ಐದು ಕಡೆ ದಾಳಿ ನಡೆದಿದೆ ಬಂಡಿವಡ್ಡರಗೆ ಸೇರಿದ ಮನೆ, ಕಚೇರಿ ಮೇಲೆ ದಾಳಿ ನಡೆದಿದೆ.
ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ ದಾಳಿಯಲ್ಲಿ
ಲೋಕಾಯುಕ್ತ ಎಸ್ ಪಿ ಹನಂಮತರಾಯ್, ಡಿವೈಎಸ್ ಪಿ ವಿಜಯ್ ಬಿರಾದಾರ್ ,ಪಿಎಸ್ ಐ ಎಸ್ ಎಸ್ ತೇಲಿ ಸೇರಿದಂತೆ ಲೋಕಾಯುಕ್ತ ಸಿಬ್ಬಂದಿ ಭಾಗಿಯಾಗಿದ್ದಾರೆ.