ಲಕ್ಷ್ಮೇಶ್ವರ: ಶಿರಹಟ್ಟಿ ಮತಕ್ಷೇತ್ರದ ಶಾಸಕ ಡಾ.ಚಂದ್ರು ಲಮಾಣಿ ಅವರ ಕಾರ್ ಚಾಲಕ ನೇಣು ಬೀಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ.
ಸುನೀಲ್ ಚವ್ಹಾಣ (25) ಆತ್ಮಹತ್ಯೆ ಮಾಡಿಕೊಂಡ ಮೃತ ದುರ್ದೈವಿಯಾಗಿದ್ದು, ಲಕ್ಷ್ಮೇಶ್ವರ ಪಟ್ಟಣದ ಮಲ್ಲಾಡದ ಕಾಲೋನಿಯಲ್ಲಿರುವ ಶಾಸಕ ಚಂದ್ರು ಲಮಾಣಿ ಅವರಿಗೆ ಸೇರಿದ,ಮನೆ ಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಶಾಸಕರ ಹತ್ತಿರದ ಸಂಬಂಧಿ ಆಗಿರುವ ಸುನೀಲ್, ಕಳೆದ ಮೂರು ವರ್ಷಗಳಿಂದ ಶಾಸಕ ಚಂದ್ರು ಲಮಾಣಿ ಕಾರ ಚಾಲಕನಾಗಿ ಕೆಲಸ ಮಾಡುತ್ತಿದ್ದನು.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಲಕ್ಷ್ಮೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.