ಗದಗ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಗದಗ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಗದಗ ತಾಲೂಕು ಕಲ್ಯಾಣಾಧಿಕಾರಿ ಡಾ. ಬಸವರಾಜ ಬಳ್ಳಾರಿ ಆಯ್ಕೆಯಾಗಿದ್ದಾರೆ.
ಮಂಗಳವಾರ ಜಿಲ್ಲಾ ಘಟಕದ ಹಾಲಿ ಅಧ್ಯಕ್ಷ ರವಿ ಗುಂಜೀಕರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಡಾ. ಬಸವರಾಜ್ ಬಳ್ಳಾರಿ ಬಹುಮತದ ಮೂಲಕ ಆಯ್ಕೆಯಾದರು. ಕಾರ್ಯಕಾರಿ ಸಮಿತಿಯ ಶೇ. 90ರಷ್ಟು ಸದಸ್ಯರು ಕೈ ಎತ್ತುವ ಮೂಲಕ ಬೆಂಬಲ ಸೂಚಿಸಿ ಡಾ. ಬಸವರಾಜ ಬಳ್ಳಾರಿ ಅವರನ್ನು ಆಯ್ಕೆ ಮಾಡಿದರು.
ಹಾಲಿ ಜಿಲ್ಲಾಧ್ಯಕ್ಷ ರವಿ ಗುಂಜೀಕರ್ ಅವರು ಎ. 30ರಂದು ಸೇವಾ ನಿವೃತ್ತಿ ಆಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಅಧ್ಯಕ್ಷರ ಆಯ್ಕೆಗಾಗಿ ತುರ್ತು ಕಾರ್ಯಕಾರಿ ಸಮಿತಿ ಸಭೆಯನ್ನು ಮಂಗಳವಾರ ಕರೆದು, ಹೊಸ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಕೈಗೊಂಡರು. ಕಾರ್ಯಕಾರಿ ಸಮಿತಿಯ ಬಹುತೇಕ ಸದಸ್ಯರು ಡಾ. ಬಸವರಾಜ ಬಳ್ಳಾರಿ ಅವರಿಗೆ ಬೆಂಬಲ ಸೂಚಿಸಿದರು.
ಡಾ. ಬಸವರಾಜ ಬಳ್ಳಾರಿ ಸದ್ಯ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದು, ಸದ್ಯ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

