ಶಾಸಕ ಸ್ಥಾನದಿಂದ ಜನಾರ್ದನ ರೆಡ್ಡಿ ಅನರ್ಹ

graochandan1@gmail.com
1 Min Read

ಬೆಂಗಳೂರು: ಸಿಬಿಐ ಕೋರ್ಟ್‌ನಿಂದ ಶಿಕ್ಷೆಗೆ ಗುರಿಯಾಗಿರುವ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಜನಪರತಿನಿಧಿಗಳ ಕಾಯ್ದೆಯಡಿ ಕೋರ್ಟ್ ನಿಂದ ಶಿಕ್ಷೆಗೆ ಗುರಿಯಾದ ಜನಪ್ರತಿನಿಧಿಗಳ ಸದಸ್ಯತ್ವ ರದ್ದಾಗಲಿದೆ. ಜನಾರ್ದನ ರೆಡ್ಡಿ ಅವರು ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾದ ನಂತರವೂ 6 ವರ್ಷಗಳ ಕಾಲ ಅವರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಓಬಳಾಪುರಂ ಮೈನಿಂಗ್ ಕಂಪನಿ(ಒಎಂಸಿ)ಯ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಗಂಗಾವತಿ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ಕೋರ್ಟ್ ಮಂಗಳವಾರ ತೀರ್ಪು ನೀಡಿತ್ತು.

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಓಬಳಾಪುರಂನಲ್ಲಿ ನಡೆದಿದೆ ಎನ್ನಲಾದ ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಬರೋಬ್ಬರಿ 13 ವರ್ಷಗಳಿಂದ ನಡೆದ ಸುದೀರ್ಘ ವಿಚಾರಣಾ ಪ್ರಕ್ರಿಯೆಯಲ್ಲಿ 3,400ಕ್ಕೂ ಹೆಚ್ಚು ದಾಖಲೆಗಳನ್ನು ಪರಿಶೀಲಿಸಲಾಗಿದೆ ಮತ್ತು 219 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.

Share this Article