ಗದಗ: ನಗರದ ತಹಶೀಲ್ದಾರ್ ಕಚೇರಿಯಲ್ಲಿ ಅಧಿಕಾರಿಗಳ ದುರ್ವರ್ತನೆಗೆ ಸಾಕ್ಷೀಕರಿಸುವಂಥ ಘಟನೆ ಶನಿವಾರ ರಾತ್ರಿ ನಡೆದಿದ್ದು, ನ್ಯಾಯ ಕೇಳಲು ಬಂದ ಯುವಕನೊಬ್ಬನಿಗೆ ಉಪ ತಹಶೀಲ್ದಾರ್ ಹಾಗೂ ಅವರ ಸಂಗಡಿಗರು ಕಚೇರಿಯಲ್ಲೇ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದ ವಿಡಿಯೋವೊಂದು ವೈರಲಾದ ಬೆನ್ನಲ್ಲೇ ಸಾರ್ವಜನಿಕರ ಮಧ್ಯೆ ತೀವ್ರ ಆಕ್ರೋಶದ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957ರ ನಿಯಮ 10(1)(ಡಿ) ಅನ್ವಯ ತಕ್ಷಣ ಜಾರಿಗೆ ಬರುವಂತೆ ವಿಚಾರಣೆಯನ್ನು ಕಾಯ್ದಿರಿಸಿ ಸರ್ಕಾರಿ ಸೇವೆಯಿಂದ ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ.
