ಜೂ. 12ರಿಂದ ಲಿಂ. ಪಂಡಿತ ಪಂಚಾಕ್ಷರಿ ಗವಾಯಿಗಳ 81ನೇ ಹಾಗೂ ಪದ್ಮಭೂಷಣ ಲಿಂ. ಡಾ. ಪಂಡಿತ ಪುಟ್ಟರಾಜ ಕವಿ ಗವಾಯಿಗಳ 15ನೇ ಪುಣ್ಯಸ್ಮರಣೋತ್ಸವ ಮತ್ತು ಉಭಯ ಗುರುಗಳ ಜಾತ್ರಾ ಮಹೋತ್ಸವ

Samagraphrabha
1 Min Read

ಗದಗ: ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಲಿಂ. ಪಂಡಿತ ಪಂಚಾಕ್ಷರಿ ಗವಾಯಿಗಳ 81ನೇ ಹಾಗೂ ಪದ್ಮಭೂಷಣ ಲಿಂ. ಡಾ. ಪಂಡಿತ ಪುಟ್ಟರಾಜ ಕವಿ ಗವಾಯಿಗಳ 15ನೇ ಪುಣ್ಯಸ್ಮರಣೋತ್ಸವ ಮತ್ತು ಉಭಯ ಗುರುಗಳ ಜಾತ್ರಾ ಮಹೋತ್ಸವ, ಕೀರ್ತನ, ಸಂಗೀತ, ಉಪನ್ಯಾಸ, ನಾಟಕ ಹಾಗೂ ಅಂಧರಗೋಷ್ಠಿ ಜೂ. 12ರಿಂದ 16ರ ವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ ಕಲ್ಲಯ್ಯಜ್ಜನವರು ಹೇಳಿದರು.

ನಗರದ ವೀರೇಶ್ವರ ಪುಣ್ಯಾಶ್ರಮದ ಸೋಮವಾರ ಬೆಳಿಗ್ಗೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂ. 12ರಂದು ಸಂಜೆ 6ಕ್ಕೆ ಶ್ರೀಶೈಲ ಪೀಠದ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರ ಸಾನ್ನಿಧ್ಯದಲ್ಲಿ ಧರ್ಮಸಭೆ ಹಾಗೂ ಕೀರ್ತನ ಸಮ್ಮೇಳನ ಜರುಗಲಿದೆ ಎಂದು ಹೇಳಿದರು.

ಜೂ. 13ರಂದು ಸಂಜೆ 6ಕ್ಕೆ ಶಿರಹಟ್ಟಿ ಜಗದ್ಗುರು ಭಾವೈಕ್ಯತಾ ಮಹಾಸಂಸ್ಥಾನಪೀಠದ ಜಗದ್ಗುರು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಕೀರ್ತನ ಸಮ್ಮೆಳನ ಹಾಗೂ ಅಂಧರಗೋಷ್ಠಿ ನಡೆಯಲಿದೆ. 14ರಂದು ಸಂಜೆ 6ಕ್ಕೆ ಮುಂಡರಗಿ ಅನ್ನದಾನೇಶ್ವರ ಸಂಸ್ಥಾನ ಮಠದ ಜಗದ್ಗುರು ನಾಡೋಜ ಡಾ. ಅನ್ನದಾನೇಶ್ವರ ಶಿವಯೋಗಿಗಳ ಸಾನ್ನಿಧ್ಯದಲ್ಲಿ ಕೀರ್ತನ ಸಮ್ಮೇಳನ ಜರುಗಲಿದೆ ಎಂದರು.

ಜೂ. 15ರಂದು ಸಂಜೆ 6ಕ್ಕೆ ಡಂಬಳ-ಗದಗ ತೋಂಟದಾರ್ಯ ಸಂಸ್ಥಾನ ಮಠದ ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯದಲ್ಲಿ ಶಿವಾನುಭವಗೋಷ್ಠಿ ಜರುಗಲಿದ್ದು, ಜೂ. 16ರಂದು ಬೆಳಿಗ್ಗೆ 8ಕ್ಕೆ ಲಿಂ. ಪಂಡಿತ ಪಂಚಾಕ್ಷರಿ ಗವಾಯಿಗಳ ಹಾಗೂ ಪದ್ಮಭೂಷಣ ಲಿಂ. ಡಾ. ಪಂಡಿತ ಪುಟ್ಟರಾಜ ಕವಿ ಗವಾಯಿಗಳ ಭಾವಚಿತ್ರದ ಮೆರವಣಿಗೆ, ಸಂಜೆ 6ಕ್ಕೆ ಉಭಯ ಗುರುಗಳ ಮಹಾರಥೋತ್ಸವ ಜರುಗಲಿದೆ ಎಂದು ಹೇಳಿದರು.

- Advertisement -
Ad image

ಜೂ. 16ರಂದು ಸಂಜೆ 6.30ಕ್ಕೆ ಹುಬ್ಬಳ್ಳಿ ಮೂರುಸಾವಿರ ಮಠದ ಜಗದ್ಗುರು ಗುರುಸಿದ್ಧರಾಜಯೋಗಿಂದ್ರ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಧರ್ಮೋತ್ತೇಜಕ ಸಭೆ ಜರುಗಲಿದೆ. ನಂತರ ವಿವಿಧ ಕ್ಷೇತ್ರಗಳ ಸಾಧಕರಿಗೆ ಪದ್ಮಭೂಷಣ ಪಂ. ಪುಟ್ಟರಾಜ ಪ್ರಶಸ್ತಿ, ಕುಮಾರಶ್ರೀ ಪ್ರಶಸ್ತಿ ಪ್ರದಾನ ಜರುಗಲಿದೆ. ಅಂದು ಅಹೋರಾತ್ರಿ ಸಂಗೀತ ಕಾರ್ಯಕ್ರಮ ಜರುಗಲಿದೆ ಎಂದು ವಿವರಿಸಿದರು.

Share this Article