ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಛತೆಯಿಂದ ಇಟ್ಟುಕೊಳ್ಳಿ:ಶಂಭುಲಿಂಗ

Samagraphrabha
1 Min Read

ರೋಣ: ಪ್ಲಾಸ್ಟಿಕ್ ಬಳಕೆಯಿಂದ ಮತ್ತು ನೀರನ್ನು ಮಿತವಾಗಿ ಬಳಸಿಕೊಳ್ಳುವ ಬಗ್ಗೆ ನಮ್ಮ ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಛತೆಯಿಂದ ಇಟ್ಟುಕೊಳ್ಳುವುದರಿಂದ ಆಹಾರದಲ್ಲಿ ಪೌಷ್ಟಿಕತೆ ಕಾಪಾಡಿಕೊಳ್ಳುವ ಸಲುವಾಗಿ ಸಿರಿಧಾನ್ಯಗಳ ಬಳಕೆಯ ಬಗ್ಗೆ ಕೃಷಿ ಮೇಲ್ವಿಚಾರಕ ಶಂಭುಲಿಂಗ ಅರ್ಗಂಜಿ ಮಾಹಿತಿ ನೀಡಿದರು.

ಪಟ್ಟಣದ ಬಸವಶಾಸ್ತ್ರಿ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಇವರ ಸಹಯೋಗದಲ್ಲಿ ವಿಶ್ವ ಪರಿಸರ ಮಾಹಿತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಬಸವಶಾಸ್ತ್ರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ
ಎಸ್.ವಿ.ಶ್ಯಾಶೆಟ್ಟಿ ಮಾತನಾಡಿ ಪರಿಸರವನ್ನು ಉಳಿಸಿ ಬೆಳಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ.ಫಲ ನೀಡುವ ಗಿಡಗಳನ್ನು ನೆಟ್ಟು ಪೋಷಣೆ ಮಾಡುಬೇಕು.ಪರಿಸರವನ್ನು ಉಳಿಸಿದರೆ ಮಾತ್ರ ಆರೋಗ್ಯಕರವಾದ ಜೀವನ ನಡೆಸಲು ಸಾಧ್ಯ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಶಾಲೆಯ ಅಧ್ಯಕ್ಷೆ ಶಾಂತಮ್ಮ ಹಿರೇಮಠ,ಕವಿತಾ ಬೆಳಹಾರ,ಶೋಭಾ ಗಿಣಿ,ಪೂಜಾ ದೊಡ್ಡಮೇಟಿ,ಈರಮ್ಮ ಸೇರಿದಂತೆ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು ‌

- Advertisement -
Ad image

Share this Article