ಗದಗ: ಪಂಚ ಗ್ಯಾರಂಟಿಗಳಿಂದ ದೂರವಾಗಿರುವ ಅರ್ಹ ಕುಟುಂಬ ಗಳನ್ನು ಪಂಚ ಗ್ಯಾರಂಟಿ ಯೋಜನೆ ವ್ಯಾಪ್ತಿಗೆ ಸೇರಿಸಲು ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ವತಿಯಿಂದ ಜುಲೈ 26 ಹಾಗೂ 27 ರಂದು ಎರಡು ದಿನಗಳ ಕಾಲ ಬೆಳಿಗ್ಗೆ 10ರಿಂದ ಸಂಜೆ 5ರ ವರೆಗೆ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಧಿಕಾರದ ಅಧ್ಯಕ್ಷರಾದ ಅಶೋಕ ಮಂದಾಲಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಪಂಚ ಗ್ಯಾರಂಟಿಗಳ ಅನುಷ್ಠಾನದಿಂದ ರಾಜ್ಯದ ಕಾನೂನು ಇಲಾಖೆ ಸಚಿವರೂ ಆಗಿರುವ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ. ಪಾಟೀಲ ಅವರ ಮಾರ್ಗದರ್ಶನದಲ್ಲಿ ಗದಗ ತಾಲೂಕು, ಜಿಲ್ಲೆಯಲ್ಲಿ ಬಡತನ ರೇಖೆಯಲ್ಲಿದ್ದ ಕುಟುಂಬಗಳನ್ನು ಆರ್ಥಿಕವಾಗಿ ಮೇಲೆತ್ತಲು ಸಹಕಾರಿಯಾಗಿದೆ. ಈಗಾಗಲೇ ಗದಗ ತಾಲೂಕಿನಲ್ಲಿ ಶೇ. 99ಕ್ಕೂ ಅಧಿಕ ಕುಟುಂಬಗಳು ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿದ್ದು, ಅರ್ಹ ಫಲಾನುಭವಿಗಳು ಯೋಜನೆಗಳನ್ನು ಸದುಪಯೋಗಪಡಿಸಿಕೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ರೇಷನ್ ಕಾರ್ಡ್ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿ, ಕುಟುಂಬದ ಸದಸ್ಯರ ಫೊಟೊ ಬದಲಾವಣೆ, ಕುಟುಂಬದ ಮುಖ್ಯಸ್ಥರ ಬದಲಾವಣೆ ಸೇರಿ ಗೃಹಲಕ್ಷ್ಮೀ, ಯುವನಿಧಿ, ಗೃಹಜ್ಯೋತಿ ಯೋಜನೆಯಡಿ ಹೊಸದಾಗಿ ಅರ್ಜಿ ಹಾಕಲಾಗುವುದು. ಇದುವರೆಗೆ ಪಂಚ ಗ್ಯಾರಂಟಿ ಯೋಜನೆಗಳ ಉಪಯೋಗಿಸಿಕೊಳ್ಳಬಹುದಾಗಿದೆ ಎಂದು ಹೇಳಿದ್ದಾರೆ.
