ರೋಣ:ಗ್ರಾಮದ ಅಭಿವೃದ್ಧಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡುವುದರ ಜೊತೆಗೆ ಅನುದಾನ ತರಲು ಮುಂದಾಗುತ್ತೇನೆ.ಗ್ರಾಮದ ಅಭಿವೃದ್ಧಿ ಗ್ರಾಮಸ್ಥರ ಸಹಕಾರ ಬಹಳ ಮುಖ್ಯ.
ಅಭಿವೃದ್ಧಿ ಕೆಲಸಗಳಿಗೆ ನನ್ನ ಆತ್ಮಕ್ಕೆ ಕೆಲಸವೇ ಸಾಕ್ಷಿ ಎಂದು ಶಾಸಕ ಜಿ.ಎಸ್.ಪಾಟೀಲ ಹೇಳಿದರು.
ತಾಲೂಕಿನ ಹಿರೇಮಣ್ಣೂರು ಗ್ರಾಮದಲ್ಲಿ ಮುಖ್ಯಮಂತ್ರಿ ವಿಶೇಷ ಅನುದಾನಲ್ಲಿ 25 ಲಕ್ಷ ರೂ.ವೆಚ್ಚದಲ್ಲಿ ಸಿ.ಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ಹಾಗೂ ಚಿಕ್ಕಮಣ್ಣೂರು ಗ್ರಾಮದಲ್ಲಿ ಆರಾಧ್ಯ ದೈವ ಶ್ರೀ ಕಲ್ಮೇಶ್ವರ ದೇವಸ್ಥಾನದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.
ಗ್ರಾಮಸ್ಥರು ಸೇರಿದಂತೆ ಇಂತಹ ಕಲ್ಲೇಶ್ವರ ದೇವಸ್ಥಾನವನ್ನು ನಿರ್ಮಿಸಿದ್ದು ಶ್ಲಾಘನೀಯ.ಯುವಕರು ಇಂತಹ ಸಾಮಾಜಿಕ ಕಾರ್ಯಕ್ರಮಗಳು ಗ್ರಾಮದಲ್ಲಿ ನಿರಂತರವಾಗಿ ಮುಂದುವರೆಸಿಕೊಂಡು ಹೋಗಬೇಕು.ಹಿಂದೂ ಧರ್ಮವು ಶ್ರೇಷ್ಠ ಸಂಸ್ಕೃತಿ ಹೊಂದಿದೆ.ತಂದೆ ತಾಯಿಗಳು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಿ ವಿದ್ಯಾವಂತರನ್ನಾಗಿ ಮಾಡಬೇಕು.ಮಕ್ಕಳಿಗೆ ಒಳ್ಳೆಯ ಸಂಸ್ಕೃತಿಯನ್ನು ನೀಡುವುದರ ಜೊತೆಗೆ ಹಿರಿಯರಿಗೆ ಪರಸ್ಪರ ಗೌರವಿಸುವ ಭಾವನೆ ಬೆಳೆಸಬೇಕು ಎಂದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಗುಲಗಂಜಿ ಮಠದ ಗುರುಪಾದ ಮಹಾಸ್ವಾಮಿಗಳು ಆಶಿರ್ವಚನ ನೀಡಿದರು.
ಇದೇ ಸಂದರ್ಭದಲ್ಲಿ ಯೂಸುಫ್ ಇಟಗಿ,ಅಕ್ಷಯ ಪಾಟೀಲ ವೆಂಕಣ್ಣ ಬಂಗಾರಿ, ಶಂಕರಗೌಡ ಪಾಟೀಲ, ನಿಂಗಪ್ಪ ನವಲಗುಂದ, ಅಬ್ದುಲಸಾಬ್ ಹೊಸಮನಿ, ಮುದಕಣ್ಣ ಮೇಟಿ, ಶಿವಪ್ಪ ಪಟ್ಟೆದ ಸೇರಿದಂತೆ ಗ್ರಾ.ಪಂ ಅಧ್ಯಕ್ಷರುಗ್ರಾಮದ ಗುರು-ಹಿರಿಯರು ಸೇರಿದಂತೆ ಇತರರು ಪಾಲ್ಗೊಂಡಿದ್ದರು.

