ಗದಗ: ಸರ್ಕಾರ ಅನ್ನಭಾಗ್ಯ ಅಕ್ಕಿಯನ್ನು ಬಡವರಿಗೆ ಉಚಿತವಾಗಿ ಪಡಿತರ ಅಂಗಡಿ ಮೂಲಕ ನೀಡುತ್ತಿದ್ದರೆ ಇದನ್ನೇ ಬಂಡವಾಳ ಮಾಡಿಕೊಂಡ ಕೆಲ ದಂಧೆಕೋರರು ಬಡವರಿಂದ ಅಕ್ಕಿ ಸಂಗ್ರಹಿಸಿ ಕಾಳ ಸಂತೆಯಲ್ಲಿ ರಾಜಾರೋಷವಾಗಿ ಮಾರಾಟ ಮಾಡುತ್ತಿದ್ದಾರೆ.
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕಂದಾಪೂರ ಮತ್ತು ಶಿರೋಳ ಗ್ರಾಮದಲ್ಲಿ ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆ ಉಪನಿರ್ದೇಶಕ ಎಂ ಎಸ್ ರಮೇಶ ನೇತೃತ್ವದಲ್ಲಿ ದಾಳಿ ನಡೆಸಿ ಒಟ್ಟು 131 ಕ್ವಿಂಟಾಲ ಅನ್ನಭಾಗ್ಯ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.
ಮುಂಡರಗಿ ತಾಲೂಕಿನ ಕಂದಾಪೂರ ಗ್ರಾಮದಲ್ಲಿ ಮನೆಯ ಹೊರ ಚಾವಣಿಯೊಂದರಲ್ಲಿ ಸಂಗ್ರಹಿಸಿಟ್ಟ 60 ಚೀಲಗಳು ಸುಮಾರು 30 ಕ್ವಿಂಟಾಲ ಅಕ್ಕಿ ಮತ್ತು ಶಿರೋಳ ಗ್ರಾಮದ ಶೆಡ್ಡ ವೊಂದರಲ್ಲಿ ಸಂಗ್ರಹಿಸಿಟ್ಟ 203 ಚೀಲ ಸುಮಾರು 101.5 ಕ್ವಿಂಟಾಲ್ ಅಕ್ಕಿ ವಶಕ್ಕೆ ಪಡೆದಿದ್ದಾರೆ.
ಒಂದೇ ರಾತ್ರಿ ನಡೆದ ದಾಳಿಯಲ್ಲಿ ಅಂದಾಜು 3 ಲಕ್ಷಕ್ಕೂ ಅಧಿಕ ಮೌಲ್ಯದ ಅನ್ನ ಭಾಗ್ಯ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.
ದಾಳಿಯಲ್ಲಿ ಎಂ ಎಸ್ ಹಿರೇಮಠ,ಶಿವರಾಜ ಆಲೂರ
ಮತ್ತು ಮುಂಡರಗಿ ಪೋಲಿಸ್ ಠಾಣೆಯ ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.
ನಿನ್ನೆ ತಡರಾತ್ರಿ ಖಚಿತ ಮಾಹಿತಿ ಮೇರೆಗೆ ಶಿರೋಳ ಮತ್ತು ಕಂದಾಪೂರ ಗ್ರಾಮದಲ್ಲಿ ದಾಳಿ ನಡೆಸಿದ್ದೇವೆ ಈ ಕುರಿತು ಪ್ರಕರಣ ದಾಖಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಮುಂಡರಗಿ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿ ಮುಂದಿನ ಕ್ರಮ ಕೈಗೊಳ್ಳಲಾಗುವುದು.
– ಎಂ ಎಸ್ ರಮೇಶ ಉಪನಿರ್ದೇಶಕರು ಆಹಾರ ಇಲಾಖೆ
,ಗದಗ

