ನ್ಯಾ. ವರ್ಮಾ ವಿರುದ್ಧದ ಕೇಸ್ ತನಿಖಾ ಸಮಿತಿಗೆ ಉತ್ತರ ಕನ್ನಡದ ಗಣಪತಿ ಭಟ್ ನೇಮಕ

Samagraphrabha
0 Min Read

ಕಾರವಾರ/ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು, ನಿವೃತ್ತ ಐಆರ್‌ಎಸ್ ಅಧಿಕಾರಿ ಗಣಪತಿ ಭಟ್ ಅವರನ್ನು, ನ್ಯಾಯಮೂರ್ತಿ ಯಶವಂತ ವರ್ಮಾ ಅವರ ವಿರುದ್ಧದ ಆರೋಪಗಳನ್ನು ತನಿಖೆ ಮಾಡಲು ರಚಿಸಲಾದ ಮೂವರು ಸದಸ್ಯರ ತನಿಖಾ ಸಮಿತಿಗೆ ಸದಸ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ. ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ಈ ಸಮಿತಿಯ ಸದಸ್ಯರಾಗಿ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಅರವಿಂದ್ ಕುಮಾರ್, ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮನೀಂದ್ರ ಮೋಹನ್ ಶ್ರೀವಾಸ್ತವ ಹಾಗೂ ಹಿರಿಯ ವಕೀಲ ಬಿ.ವಿ.ಆಚಾರ್ಯ ನಿಯುಕ್ತಿಯಾಗಿದ್ದಾರೆ.

Share this Article