ರೋಣ: ಹಳ್ಳ ದಾಟುವ ವೇಳೆಯಲ್ಲಿ ಬೈಕನ ಆಯ ತಪ್ಪಿ ಹಳ್ಳದ ನೀರಲ್ಲಿ ಕೊಚ್ಚಿಹೋದ ಆರೋಗ್ಯ ಇಲಾಖೆ ಸಿಬ್ಬಂದಿಗಳು ಕೊಚ್ಚಿ ಹೋಗಿದ್ದು ಇಬ್ಬರು ಪಾರಾಗಿದ್ದು ಒಬ್ಬರಿಗಾಗಿ ಶೋಧ ಮುಂದುವರೆದಿದೆ.
ಗದಗ ಜಿಲ್ಲೆ ರೋಣ ತಾಲೂಕಿನ ಯಾ.ಸ. ಹಡಗಲಿ ಗ್ರಾಮದ ಬಳಿ ಘಟನೆ ನಡೆದಿದ್ದು ಯಾ.ಸ. ಹಡಗಲಿ ಹಳ್ಳ ದಾಟುವಾಗ ದುರ್ಘಟನೆ ನಡೆದಿದ್ದು ರೋಣ ತಾಲೂಕಿನ ಯಾ.ಸ. ಹಡಗಲಿ ಗ್ರಾಮದಲ್ಲಿ ಆಯೋಜಿಸಿದ್ದ ಆರೋಗ್ಯ ಮೇಳ ಕಾರ್ಯಕ್ರಮ ಮುಗಿಸಿ ಬರುವಾಗ ಘಟನೆ ನಡೆದಿದೆ ಒಂದೇ ಬೈಕ್ ನಲ್ಲಿ ಪ್ರಯಾಣ ಮಾಡುತ್ತಿದ್ದ ಮೂರು ಜನ ಆರೋಗ್ಯ ಇಲಾಖೆ ಸಿಬ್ಬಂದಿಗಳು
ಕೌಜಗೇರಿ ಆಯುಷ್ಮಾನ್ ಆರೋಗ್ಯ ಮಂದಿರ ಉಪ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.
ಬಸವರಾಜ್ ಹಾಗೂ ವೀರಸಂಗಯ್ಯ ಪಾರಾಗಿದ್ದು ಬಸಮ್ಮ ಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಸ್ಥಳಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ ಎಸ್.ಎಸ್ ನಿಲಗುಂದ, ರೋಣ ತಹಶಿಲ್ದಾರ ಸೇರಿದಂತೆ ವಿವಿಧ ಅಧಿಕಾರಿಗಳು ಭೇಟಿನೀಡಿದ್ದು
ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ ಮುಂದುವರೆದಿದೆ.
ಗದಗ ಜಿಲ್ಲೆ ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

