ಚೆನ್ನೈ,ಸ : ತಮಿಳುನಾಡಿನ ಕರೂರು ಪಟ್ಟಣದಲ್ಲಿ ಕಾಲ್ತುಳಿತ ಉಂಟಾಗಿ ಸಾವನ್ನಪ್ಪಿದವರ ಕುಟುಂಬಗಳಿಗೆ ಚಿತ್ರನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ಅಧ್ಯಕ್ಷರಾಗಿರುವ ವಿಜಯ್, ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಇದೇ ವೇಳೆ ಘಟನೆಯಲ್ಲಿ ಗಾಯಗೊಂಡಿರುವ ಕುಟುಂಬಗಳಿಗೂ ಚಿಕಿತ್ಸೆಗಾಗಿ ತಲಾ ಒಂದು ಲಕ್ಷ ರೂ. ಪರಿಹಾರ ನೀಡುವುದಾಗಿ ವಿಜಯ್ ತಿಳಿಸಿದ್ದಾರೆ.
ಈ ಕುರಿತು ತಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕರೂರು ಪಟ್ಟಣದಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟವರ ಪ್ರತಿ ಕುಟುಂಬಗಳಿಗೆ 20 ಲಕ್ಷ ರೂ. ಪರಿಹಾರ ನೀಡುತ್ತೇನೆ. ಅಲ್ಲದೆ ಆಸ್ಪತ್ರೆಯಲ್ಲಿರುವ ಗಾಯಾಳುಗಳಿಗೂ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಹೇಳಿದ್ದಾರೆ.
ಇದೇ ವೇಳೆ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು, ಘಟನೆ ಸಂಬಂಧ ಸರ್ಕಾರದ ವತಿಯಿಂದ ಪ್ರತಿ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡುವುದಾಗಿ ಪ್ರಕಟಿಸಿದ್ದಾರೆ. ತೀವ್ರವಾಗಿ ಗಾಯಗೊಂಡು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಿಗೆ ತಲಾ ಎರಡು ಲಕ್ಷ ರೂ. ನೀಡುವುದಾಗಿ ಹೇಳಿದ್ದಾರೆ.
